ಧರ್ಮೋಪದೇಶಕಾಂಡ 17:19 - ಕನ್ನಡ ಸತ್ಯವೇದವು J.V. (BSI)19 ಅವನು ಮದದಿಂದ ತನ್ನ ಸ್ವದೇಶದವರನ್ನು ಹಿಯ್ಯಾಳಿಸದೆ ಯೆಹೋವನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳದೆ ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಈ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸುವದಕ್ಕೆ ಅಭ್ಯಾಸ ಮಾಡಿಕೊಳ್ಳುವಂತೆ ಈ ಗ್ರಂಥವು ಅವನ ಬಳಿಯಲ್ಲೇ ಇರಬೇಕು; ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದರಲ್ಲಿ ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವನು ಆ ಪುಸ್ತಕವನ್ನು ತನ್ನೊಂದಿಗಿಟ್ಟುಕೊಂಡು ಅದನ್ನು ತನ್ನ ಜೀವಮಾನ ಪೂರ್ತಿ ಪದೇಪದೇ ಓದುತ್ತಿರಬೇಕು. ಯಾಕೆಂದರೆ ಧರ್ಮಶಾಸ್ತ್ರವು ಆಜ್ಞಾಪಿಸುವ ಪ್ರತಿಯೊಂದಕ್ಕೂ ಸಂಪೂರ್ಣವಾಗಿ ವಿಧೇಯನಾಗಲು ಅವನು ಕಲಿತುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿ |