Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:12 - ಕನ್ನಡ ಸತ್ಯವೇದವು J.V. (BSI)

12 ಇಂಥ ಕೆಲಸಗಳನ್ನು ನಡಿಸುವವರು ಯೆಹೋವನಿಗೆ ಅಸಹ್ಯರಾಗಿದ್ದಾರೆ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮೆದುರಿನಿಂದ ಹೊರಡಿಸಿಬಿಡುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಂಥ ಕಾರ್ಯಗಳನ್ನು ಮಾಡುವ ಜನರನ್ನು ದೇವರು ದ್ವೇಷಿಸುತ್ತಾನೆ. ಆದ್ದರಿಂದಲೇ ಆ ಜನಾಂಗಗಳವರನ್ನು ನಿಮಗೋಸ್ಕರವಾಗಿ ಈ ದೇಶದಿಂದ ಹೊರಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:12
9 ತಿಳಿವುಗಳ ಹೋಲಿಕೆ  

ಈ ದುರಾಚಾರಗಳಲ್ಲಿ ಯಾವದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಹೇಸಿಗೆಯಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.


ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು.


ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದದರಿಂದ ನೀವು ಅವರನ್ನು ಕೈಬಿಡಬಾರದು.


ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ಸ್ತ್ರೀಯು ಪುರುಷವೇಷವನ್ನೂ ಪುರುಷನು ಸ್ತ್ರೀವೇಷವನ್ನೂ ಹಾಕಿಕೊಳ್ಳಕೂಡದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಹೇಯರು.


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು