Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:14 - ಕನ್ನಡ ಸತ್ಯವೇದವು J.V. (BSI)

14 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ. ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮ್ಮ ದೇಶದೊಳಗಿಂದ ಇತರ ಜನಾಂಗದವರನ್ನು ನಾಶಮಾಡಬೇಕು. ಆ ಜನರು ಮಾಟಮಂತ್ರಗಳ ಮೂಲಕ ಮತ್ತು ಕಣಿ ಹೇಳುವವರಿಂದ ತಮ್ಮ ಭವಿಷ್ಯವನ್ನು ವಿಚಾರಿಸುವರು. ಆದರೆ ನಿಮ್ಮ ದೇವರಾದ ಯೆಹೋವನು ಅಂಥಾ ಕೆಲಸವನ್ನು ಮಾಡಲು ನಿಮ್ಮನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:14
9 ತಿಳಿವುಗಳ ಹೋಲಿಕೆ  

ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಅದಕ್ಕೆ ದೇವರು - ನೀನು ಇದನ್ನು ಯರ್ಥಾರ್ಥಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನಾನಂತೂ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ - ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು;


ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು, ನಿನ್ನಲ್ಲಿ ಕಣಿಯವರು ಇನ್ನಿರರು;


ಯಾಕೋಬನ ಮನೆತನದವರು ಮೂಡಣ ದೇಶಗಳ [ಮಂತ್ರತಂತ್ರಗಳಲ್ಲಿ] ಮಗ್ನರೂ ಫಿಲಿಷ್ಟಿಯರ ಹಾಗೆ ಕಣಿಹೇಳುವವರೂ ಅನ್ಯದೇಶಗಳವರ ಸಂಗಡ ಒಪ್ಪಂದಮಾಡುವವರೂ ಆಗಿರುವದರಿಂದ ಈ ನಿನ್ನ ಜನರನ್ನು ಕೈಬಿಟ್ಟಿದ್ದೀಯಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು