Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:2 - ಕನ್ನಡ ಸತ್ಯವೇದವು J.V. (BSI)

2 ಸ್ವದೇಶಸ್ಥರೊಂದಿಗೆ ಅವರಿಗೆ ಸ್ವಾಸ್ತ್ಯವು ದೊರೆಯುವದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವಾಸ್ತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೇರೆ ಕುಲದವರಂತೆ ಅವರಿಗೆ ಭೂಮಿ ದೊರೆಯುವುದಿಲ್ಲ. ದೇವರು ಹೇಳಿದ ಪ್ರಕಾರ ಅವರ ಪಾಲು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:2
15 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಯೆಹೋವನೇ, ನನ್ನ ಪಾಲು ನೀನೇ; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರ ದೇಶದಲ್ಲಿ ನಿನಗೆ ಸ್ವಂತಕ್ಕಾಗಿ ಭೂಸ್ಥಿತಿ ಆಗುವದಿಲ್ಲ; ಅವರೊಂದಿಗೆ ನಿನಗೆ ಪಾಲು ಇರುವದಿಲ್ಲ. ಇಸ್ರಾಯೇಲ್ಯರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಸ್ವಾಸ್ತ್ಯವಾಗಿಯೂ ಇದ್ದೇನೆ.


ಆದದರಿಂದ ವಿುಕ್ಕ ಇಸ್ರಾಯೇಲ್ಯರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವಾಸ್ತ್ಯ.


ಲೇವಿ ಕುಲದವರಿಗೆ ಮಾತ್ರ ಪಾಲು ಸಿಕ್ಕಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯ.


ಯಾಜಕರಿಗೆ ಒಂದು ಸ್ವಾಸ್ತ್ಯವಾಗುವದು, ನಾನೇ ಅವರ ಸ್ವಾಸ್ತ್ಯ; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು