ಧರ್ಮೋಪದೇಶಕಾಂಡ 18:20 - ಕನ್ನಡ ಸತ್ಯವೇದವು J.V. (BSI)20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.” ಅಧ್ಯಾಯವನ್ನು ನೋಡಿ |