Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:5 - ಕನ್ನಡ ಸತ್ಯವೇದವು J.V. (BSI)

5 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವದಕ್ಕೆ ತಾನೇ ನೇವಿುಸಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಕುಲಗಳಲ್ಲಿ ಲೇವಿಯನನ್ನು, ಇವನ ತರುವಾಯ ಇವನ ಸಂತತಿಯವರನ್ನು, ತಮ್ಮ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವುದಕ್ಕೆ ತಾವೇ ನೇಮಿಸಿಕೊಂಡು ಇದ್ದಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೆಂದರೆ ನಿಮ್ಮ ದೇವರಾದ ಯೆಹೋವನು ಇಸ್ರೇಲ್ ಕುಲದವರಿಂದ ಲೇವಿಕುಲದವರನ್ನು ನಿರಂತರವಾಗಿ ಆತನ ಸೇವೆಮಾಡುವುದಕ್ಕೆ ಆರಿಸಿಕೊಂಡಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:5
9 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಸುತ್ತಿಸಬೇಕು. ಆ ಹೊತ್ತಿನಿಂದ ಯಾಜಕತ್ವವು ಶಾಶ್ವತವಾದ ನಿಯಮದಿಂದ ಅವರಿಗೆ ಉಂಟಾಗುವದು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕೋದ್ಯೋಗಕ್ಕೆ ಸೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು