ಧರ್ಮೋಪದೇಶಕಾಂಡ 19:12 - ಕನ್ನಡ ಸತ್ಯವೇದವು J.V. (BSI)12 ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನ ಊರಿನ ಹಿರಿಯರು ಅವನನ್ನು ಆ ಆಶ್ರಯನಗರದೊಳಗಿಂದ ಹಿಡಿದುತಂದು ಕೊಲೆ ಮಾಡಲ್ಪಟ್ಟವನ ಸಮೀಪ ಬಂಧುವಿಗೆ ಒಪ್ಪಿಸಬೇಕು, ಕೊಲೆಗಾರನು ಸಾಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು. ಅಧ್ಯಾಯವನ್ನು ನೋಡಿ |
ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.