Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:2 - ಕನ್ನಡ ಸತ್ಯವೇದವು J.V. (BSI)

2 ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರ ಗ್ರಾಮಗಳಲ್ಲೂ ಮನೆಗಳಲ್ಲೂ ವಾಸವಾಗಿರುವಾಗ ಆ ನಿಮ್ಮ ನಾಡಿನ ಮಧ್ಯೆ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-3 ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:2
7 ತಿಳಿವುಗಳ ಹೋಲಿಕೆ  

ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು