Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:3 - ಕನ್ನಡ ಸತ್ಯವೇದವು J.V. (BSI)

3 ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:3
8 ತಿಳಿವುಗಳ ಹೋಲಿಕೆ  

ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಆಟಂಕವನ್ನು ಎತ್ತಿಹಾಕಿರಿ ಎಂದು ಒಂದು ವಾಣಿಯು ನುಡಿಯುತ್ತದೆ.


ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.


ಆ ಪಟ್ಟಣಗಳ ಸಂಗತಿ ಹೇಗಂದರೆ - ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು