ಧರ್ಮೋಪದೇಶಕಾಂಡ 19:6 - ಕನ್ನಡ ಸತ್ಯವೇದವು J.V. (BSI)6 ಸತ್ತವನಲ್ಲಿ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲವಲ್ಲಾ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಾನು; ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದುಹಾಕಿಬಿಟ್ಟಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು. ಅಧ್ಯಾಯವನ್ನು ನೋಡಿ |
ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.