Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:15 - ಕನ್ನಡ ಸತ್ಯವೇದವು J.V. (BSI)

15 ಯೆಹೋವನ ಹಸ್ತವು ಅವರಿಗೆ ವಿರೋಧವಾದದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ಹಸ್ತವು ಅವರಿಗೆ ವಿರೋಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:15
13 ತಿಳಿವುಗಳ ಹೋಲಿಕೆ  

ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ


ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.


ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು; ಅವರಿಗೆ ಬಹುಸಂಕಟವಾಯಿತು.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಹೇಳುವದೇನಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು