Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:19 - ಕನ್ನಡ ಸತ್ಯವೇದವು J.V. (BSI)

19 ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಎಷ್ಟು ಭಾಗವನ್ನಾದರೂ ಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:19
8 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ - ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕೆಂದು ಆಜ್ಞಾಪಿಸಿದನು.


ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ.


ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.


ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರವಿುಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನಷ್ಟೆ.


ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸನಾದ ಸೀಹೋನನ ವಶದಲ್ಲಿದ್ದು ಅಮ್ಮೋನಿಯರ ಮೇರೆಯ ಈಚೆಗಿದ್ದಂಥ ಎಲ್ಲಾ ಪಟ್ಟಣಗಳು,


ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು