Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:21 - ಕನ್ನಡ ಸತ್ಯವೇದವು J.V. (BSI)

21 ಅವರು ಬಲಿಷ್ಠರೂ ಬಹುಜನವೂ ಅನಾಕ್ಯರಂತೆ ಉನ್ನತರಾದವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರು ಬಲಿಷ್ಠರು, ಬಹುಜನರು ಹಾಗು ಅನಾಕಿಮರಂತೆ ಎತ್ತರದವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜಮ್‌ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್‌ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:21
8 ತಿಳಿವುಗಳ ಹೋಲಿಕೆ  

ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವದನ್ನು ನಾವು ಸ್ವತಂತ್ರಿಸಿಕೊಳ್ಳುವದು ನ್ಯಾಯವಾಗಿದೆ.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)


ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


(ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದದರಿಂದ ಅದೂ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು