Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:25 - ಕನ್ನಡ ಸತ್ಯವೇದವು J.V. (BSI)

25 ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಇಂದಿನಿಂದ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:25
14 ತಿಳಿವುಗಳ ಹೋಲಿಕೆ  

ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.


ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ನೀವು ಹೋಗುವ ಎಲ್ಲಾ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ ಕಳವಳವನ್ನು ಉಂಟು ಮಾಡಿ ನಿಮ್ಮನ್ನು ವಿರೋಧಿಸುವವರನ್ನು ಓಡಿಹೋಗುವಂತೆ ಮಾಡುವೆನು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.


ಅವರು ಯೆಹೋಶುವನಿಗೆ - ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ - ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿಬಿಡಬೇಕೆಂದು ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರುವಂತೆ ಮಾಡಿದನು.


ಇಸ್ರಾಯೇಲ್ಯರು ಬಹು ಮಂದಿಯಾದದರಿಂದ ಮೋವಾಬ್ಯರು ಬಲು ದಿಗಿಲುಪಟ್ಟರು. ಅವರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾಗಿ ವಿುದ್ಯಾನ್ಯರ ಹಿರಿಯರಿಗೆ -


ಆಯಿ ಎಂಬ ಊರಿಗಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರು ತಾವೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದುಳಿಯುವದಕ್ಕೋಸ್ಕರ ಅವರ ಸಂಗಡ ಒಡಂಬಡಿಕೆ ಮಾಡಿಕೊಂಡರೆಂಬದನ್ನೂ ಯೆರೂಸಲೇವಿುನ ಅರಸನಾದ ಅದೋನೀಚೆದೆಕನು ಕೇಳಿ ಬಹಳವಾಗಿ ಭಯಪಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು