Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:29 - ಕನ್ನಡ ಸತ್ಯವೇದವು J.V. (BSI)

29 ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:29
15 ತಿಳಿವುಗಳ ಹೋಲಿಕೆ  

ಆದರೆ ಎದೋಮ್ಯರು - ನಮ್ಮ ದೇಶವನ್ನು ನೀವು ದಾಟಿ ಹೋಗಕೂಡದು; ದಾಟುವದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ ಎಂದು ಉತ್ತರ ಕೊಟ್ಟರು.


ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.


ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಆಗ ಯೆಹೋವನು ನನಗೆ - ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕೆಂದು ಆಜ್ಞಾಪಿಸಿದನು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲ ಪುರುಷನು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


(ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು