Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:6 - ಕನ್ನಡ ಸತ್ಯವೇದವು J.V. (BSI)

6 ನೀವು ಅಲ್ಲಿ ರೊಕ್ಕಕೊಟ್ಟು ಆಹಾರ ಪದಾರ್ಥಗಳನ್ನು ಕೊಂಡು ತಿನ್ನಬೇಕು; ನೀರನ್ನೂ ಕೊಂಡುಕೊಂಡು ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಅಲ್ಲಿ ಕಾಸುಕೊಟ್ಟು ಆಹಾರಪದಾರ್ಥಗಳನ್ನು ಕೊಂಡು ತಿನ್ನಬೇಕು; ನೀರನ್ನೂ ಕೊಂಡುಕೊಂಡು ಕುಡಿಯಬೇಕು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:6
7 ತಿಳಿವುಗಳ ಹೋಲಿಕೆ  

ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವವಾದದ್ದೋ ಅದನ್ನೇ ಯೋಚಿಸಿ ಸಾಧಿಸಿರಿ.


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.


ಅದಕ್ಕೆ ಇಸ್ರಾಯೇಲ್ಯರು - ನಾವು ರಾಜಮಾರ್ಗದಲ್ಲಿಯೇ ಹೋಗುವೆವು; ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆಕೊಡುವೆವು; ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿ ಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು ಎಂದು ಹೇಳಿದರು.


ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು