Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:10 - ಕನ್ನಡ ಸತ್ಯವೇದವು J.V. (BSI)

10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದರ ಹತ್ತಿರಕ್ಕೆ ಬಂದಾಗ, ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಶರಣಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನಕ್ಕೆ’ ಕರೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:10
13 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.


ನಾನು ಎಫ್ರಾಯೀವಿುನ ರಥಬಲವನ್ನೂ ಯೆರೂಸಲೇವಿುನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಹರಡಿಕೊಂಡಿರುವದು.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದನಂತರ ದಂಡಿನವರ ಮೇಲೆ ನಾಯಕರನ್ನು ನೇವಿುಸಬೇಕು.


ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.


ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನವಾಕ್ಯವನ್ನು ಪ್ರಕಟಿಸಲು ಅವರು ತಿರಿಗಿ ಬಂದರು.


ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ -


ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನನ್ನು - ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವದಕ್ಕೇನು ಕಾರಣ ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು