Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:16 - ಕನ್ನಡ ಸತ್ಯವೇದವು J.V. (BSI)

16 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:16
25 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಅವುಗಳಲ್ಲಿದ್ದ ಪಶುಗಳನ್ನೂ ವಸ್ತುಗಳನ್ನೂ ಕೊಳ್ಳೆ ಹಿಡಿದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲಮಾಡಿದರು. ಒಂದು ಪ್ರಾಣಿಯನ್ನೂ ಉಳಿಸಲಿಲ್ಲ.


ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.


ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ಆದಕಾರಣ ಇಸ್ರಾಯೇಲ್ಯರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಒಬ್ಬರಾದರೂ ಉಳಿಯದಂತೆ ಹತಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.


ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ಅವರು ಯೆಹೋಶುವನಿಗೆ - ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ - ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿಬಿಡಬೇಕೆಂದು ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು;


ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.


ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ, ನನ್ನ ಅಪ್ಪಣೆ ಇಷ್ಟೇ ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳುಹಿಸಿದನು.


ಆ ದಿನ ಆಯಿ ಎಂಬ ಊರಿನವರಲ್ಲಿ ಸಂಹೃತರಾದ ಗಂಡಸರೂ ಹೆಂಗಸರೂ ಹನ್ನೆರಡು ಸಾವಿರ ಮಂದಿ.


ಈ ಪ್ರಕಾರ ಯೆಹೋಶುವನೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ


ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಪರಿಗ್ರಹಿಸುವದು ಯೆಹೋವನಿಗೆ ಹೇಯಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶ ಕೊಡಬಾರದು.


ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು