Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:6 - ಕನ್ನಡ ಸತ್ಯವೇದವು J.V. (BSI)

6 ಯಾವನಾದರೂ ದ್ರಾಕ್ಷೇತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾವನಾದರು ದ್ರಾಕ್ಷೀತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮಲ್ಲಿ ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಫಲವನ್ನು ಕೂಡಿಸಿಲ್ಲದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನು ರಣರಂಗದಲ್ಲಿ ಮಡಿದರೆ ಅವನ ದ್ರಾಕ್ಷಿತೋಟದ ಫಲಗಳು ಬೇರೊಬ್ಬನ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:6
8 ತಿಳಿವುಗಳ ಹೋಲಿಕೆ  

ಅವರ ಆಸ್ತಿಯು ಸೂರೆಯಾಗುವದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನೀನು ತಿರಿಗಿ ಸಮಾರ್ಯದ ಗುಡ್ಡಗಳಲ್ಲಿ ತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನನುಭವಿಸುವರು.


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು.


ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೆ ಇರುವದುಂಟೋ? ಪಶುಗಳನ್ನು ಸಾಕಿದವನು ಅವುಗಳ ಹೈನಿನಿಂದ ಜೀವಿಸದೆ ಇರುವದುಂಟೋ?


ಮತ್ತು ಸೈನ್ಯಾಧಿಪತಿಗಳು ಅವರಿಗೆ - ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನೂ ಗೃಹಪ್ರವೇಶ ಮಾಡದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶಮಾಡಿಕೊಂಡಾನು.


ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು