ಧರ್ಮೋಪದೇಶಕಾಂಡ 20:7 - ಕನ್ನಡ ಸತ್ಯವೇದವು J.V. (BSI)7 ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನು ಸೇರಿಸಿಕೊಳ್ಳದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು,’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮಲ್ಲಿ ಯಾರಾದರೂ ಮದುವೆಯಾಗಲು ಹೆಣ್ಣನ್ನು ನಿಶ್ಚಯಿಸಿದ್ದರೆ ಅವನು ತನ್ನ ಮನೆಗೆ ಹಿಂತಿರುಗಿಹೋಗಲಿ; ಯಾಕೆಂದರೆ ಅವನು ರಣರಂಗದಲ್ಲಿ ಮಡಿದರೆ ಅವನಿಗೆ ನಿಶ್ಚಯವಾದ ಹೆಣ್ಣನ್ನು ಇನ್ನೊಬ್ಬನು ಮದುವೆ ಮಾಡಿಕೊಳ್ಳಬಹುದು’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯಾವನಾದರೂ ಮದುವೆ ಮಾಡಿಕೊಂಡಿದ್ದು, ತನ್ನ ಹೆಂಡತಿಯೊಂದಿಗೆ ಸಂಸಾರ ಮಾಡಿರದಿದ್ದರೆ, ಅಂಥವನು ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ, ಬೇರೊಬ್ಬನು ಆಕೆಯನ್ನು ಸೇರಿಸಿಕೊಂಡಾನು.” ಅಧ್ಯಾಯವನ್ನು ನೋಡಿ |