ಧರ್ಮೋಪದೇಶಕಾಂಡ 20:8 - ಕನ್ನಡ ಸತ್ಯವೇದವು J.V. (BSI)8 ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |