Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:17 - ಕನ್ನಡ ಸತ್ಯವೇದವು J.V. (BSI)

17 ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ತಾನು ಪ್ರೀತಿಸದೆ ಇರುವ ಹೆಂಡತಿಯ ಚೊಚ್ಚಲಮಗನನ್ನು ಅವನು ಸ್ವೀಕರಿಸಬೇಕು. ಆ ಚೊಚ್ಚಲಮಗನಿಗೆ ಬೇರೆ ಮಕ್ಕಳಿಗಿಂತ ಎರಡು ಪಾಲು ಆಸ್ತಿಯನ್ನು ಕೊಡಬೇಕು. ಯಾಕೆಂದರೆ ಅವನು ನಿಮ್ಮ ಚೊಚ್ಚಲ ಮಗನು. ಚೊಚ್ಚಲ ಮಗನ ಹಕ್ಕು ಅವನಿಗೆ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಪ್ರೀತಿಮಾಡದವಳ ಮಗನಿಗೆ ತನ್ನ ಬಳಿಯಲ್ಲಿರುವ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು, ಅವನೇ ಜೇಷ್ಠ ಪುತ್ರನೆಂದು ಒಪ್ಪಿಕೊಳ್ಳಬೇಕು. ಏಕೆಂದರೆ ಅವನೇ ಅವನ ಪ್ರಥಮ ಫಲ. ಅವನಿಗೆ ಜೇಷ್ಠ ಪುತ್ರನ ಹಕ್ಕು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:17
10 ತಿಳಿವುಗಳ ಹೋಲಿಕೆ  

ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ ನನ್ನ ವೀರ್ಯಕ್ಕೆ ಪ್ರಥಮ ಫಲವೂ ಗೌರವದಲ್ಲಿಯೂ ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.


ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ ಚೊಚ್ಚಲ ಮಕ್ಕಳನ್ನು ಸಂಹರಿಸಿದನು.


ಅವರಲ್ಲಿ ಕಿರಿಯವನು ತಂದೆಗೆ - ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಎಂದು ಕೇಳಿಕೊಳ್ಳಲು ತಂದೆಯು ಬದುಕನ್ನು ಅವರಿಗೆ ಹಂಚಿಕೊಟ್ಟನು.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ತಂದೆಯು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.


ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು.


ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ ಶ್ರೇಷ್ಠವಸ್ತು ಇತ್ಯಾದಿ ವಿಶೇಷದಾನಗಳನ್ನು ಕೊಟ್ಟನು; ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು