Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:18 - ಕನ್ನಡ ಸತ್ಯವೇದವು J.V. (BSI)

18 ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ ಮೊಂಡನೂ ಅವಿಧೇಯನೂ ಆಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ, ಶಿಕ್ಷಿಸಿದ್ದರೂ ಮೊಂಡನೂ ಅವಿಧೇಯನೂ ಆಗಿ, ಅವರ ಮಾತನ್ನು ಕೇಳದೆಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಒಬ್ಬ ಮನುಷ್ಯನಿಗೆ ಹಠಮಾರಿಯಾದ ಅವಿಧೇಯ ಮಗನಿರಬಹುದು. ಈ ಮಗನು ತಂದೆಯ ಮಾತನ್ನಾಗಲಿ ತಾಯಿಯ ಮಾತನ್ನಾಗಲಿ ಕೇಳದವನಾಗಿದ್ದರೆ ಅವನಿಗೆ ಅವರು ಶಿಕ್ಷೆ ಕೊಟ್ಟರೂ ಅವನು ಅವರಿಗೆ ವಿಧೇಯನಾಗದಿದ್ದರೆ, ಅವರ ಮಾತುಗಳನ್ನು ಕೇಳದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಬ್ಬ ಮನುಷ್ಯನಿಗೆ ಮೊಂಡನೂ, ತಿರುಗಿ ಬೀಳುವವನೂ ಆದ ಮಗನಿದ್ದರೆ, ಅವನು ತಂದೆತಾಯಿಯ ಮಾತನ್ನೂ ಕೇಳದೆ, ಅವರು ಅವನನ್ನು ಶಿಸ್ತುಪಡಿಸಲು ಹೇಳುವ ಮಾತನ್ನೂ ಕೇಳದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:18
31 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವದು.


ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ.


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ತಾಯಿಗೆ ಶುಭವನ್ನು ಕೋರದೆ ತಂದೆಯನ್ನು ಶಪಿಸುವ ಒಂದು ತರದವರುಂಟು.


ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು.


ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು.


ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.


ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ.


ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.


ಲೇವಿಯರು - ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು


ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.


ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು.


ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದವನಿಗೆ ಮರಣಶಿಕ್ಷೆಯಾಗಬೇಕು.


ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು ಊರುಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ -


ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು