ಧರ್ಮೋಪದೇಶಕಾಂಡ 21:20 - ಕನ್ನಡ ಸತ್ಯವೇದವು J.V. (BSI)20 ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವದೇ ಇಲ್ಲ. ಆಜ್ಞೆಗೆ ಒಳಗಾಗುವದಿಲ್ಲ; ಇವನು ಮೊಂಡ ಕುಡಿಕ ತುಂಟ ಎಂದು ಸಾಕ್ಷಿ ಹೇಳಬೇಕು. ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |