ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇಯಾಗಲಿ ಸ್ವದೇಶಸ್ಥನೇಯಾಗಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಆ ದೂಷಿಸಿದವನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಯಾಜಕನು ಇಸ್ರಾಯೇಲ್ಯರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದನ್ನು ಪರಿಹರಿಸುವದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನೂ ದೋಷಪರಿಹಾರಕಯಜ್ಞವನ್ನೂ ಮಾಡಿಸಿದ್ದರಿಂದ
ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವದೇ ಇಲ್ಲ. ಆಜ್ಞೆಗೆ ಒಳಗಾಗುವದಿಲ್ಲ; ಇವನು ಮೊಂಡ ಕುಡಿಕ ತುಂಟ ಎಂದು ಸಾಕ್ಷಿ ಹೇಳಬೇಕು. ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ಬಲುದೊಡ್ಡ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.