ಧರ್ಮೋಪದೇಶಕಾಂಡ 21:4 - ಕನ್ನಡ ಸತ್ಯವೇದವು J.V. (BSI)4 ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎಂದಿಗೂ ವ್ಯವಸಾಯವಿಲ್ಲದಂಥ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು. ಅಧ್ಯಾಯವನ್ನು ನೋಡಿ |