21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
21 ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
21 ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
21 ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಥೆಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಕೂಡಿ ಇಸ್ರಾಯೇಲ್ಯರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ನಡಿಸಿದನು; ಅದು ಆಗಬಾರದ ಕಾರ್ಯ.
ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲ್ಯರಲ್ಲಿ ನಡಿಸಿದ ದುಷ್ಕರ್ಮಕ್ಕಾಗಿ ಅವರಿಗೆ ದಂಡನೆ ಮಾಡೋಣ ಅಂದುಕೊಂಡರು.
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಯಾವನಾದರೂ ಪರನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ಹೊರಬಿದ್ದರೆ ಆ ಸ್ತ್ರೀ ಪುರುಷರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.
ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡುಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.
ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇಯಾಗಲಿ ಸ್ವದೇಶಸ್ಥನೇಯಾಗಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.
ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.