Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:24 - ಕನ್ನಡ ಸತ್ಯವೇದವು J.V. (BSI)

24 ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:24
14 ತಿಳಿವುಗಳ ಹೋಲಿಕೆ  

ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡಿಸಲೂ ಬಾರದು.


ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.


ಆಗ ಯೋಸೇಫನು ನಿದ್ದೆ ತಿಳಿದೆದ್ದು ಕರ್ತನ ದೂತನು ಅಪ್ಪಣೆಕೊಟ್ಟ ಹಾಗೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು.


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ತರುವಾಯ ಯಾಕೋಬನು ಲಾಬಾನನಿಗೆ - ಗೊತ್ತುಮಾಡಿದ ಕಾಲವು ಮುಗಿದು ಹೋಯಿತು; ಆಕೆಯನ್ನು ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡು ಎಂದು ಹೇಳಿದನು.


ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗವಿುಸಿದರೆ


ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗವಿುಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.


[ನಾನು ಹೀಗೆ ಮಾಡಿದ್ದರೆ] ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು,


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ವ್ಯಭಿಚಾರಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು