Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವದಕ್ಕೂ ಶತ್ರುಗಳನ್ನು ನಿಮ್ಮ ಕೈವಶಮಾಡುವದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದದರಿಂದ ಪಾಳೆಯವು ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:14
8 ತಿಳಿವುಗಳ ಹೋಲಿಕೆ  

ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು; ನೀವು ನನಗೆ ಪ್ರಜೆಯಾಗಿರುವಿರಿ.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ದಂಡಿಗೂ ನಮ್ಮ ಪ್ರಿಯ ಪಟ್ಟಣಕ್ಕೂ ಮುತ್ತಿಗೆಹಾಕಿದರು. ಆಗ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಟ್ಟಿತು.


ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.


ಯುದ್ಧದ ಸಾಮಾನುಗಳಲ್ಲದೆ ಸಲಿಕೆ ನಿಮ್ಮ ಬಳಿಯಲ್ಲಿ ಇರಬೇಕು; ನೀವು ಬಹಿರ್ಭೂವಿುಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು