Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:15 - ಕನ್ನಡ ಸತ್ಯವೇದವು J.V. (BSI)

15 ತಪ್ಪಿಸಿಕೊಂಡ ದಾಸನು ನಿಮ್ಮಲ್ಲಿರುವದಕ್ಕೆ ಬಂದರೆ ಅವನನ್ನು ಅವನ ದಣಿಗೆ ತಿರಿಗಿ ವಶಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ತಪ್ಪಿಸಿಕೊಂಡ ಒಬ್ಬ ಗುಲಾಮನು ನಿಮ್ಮಲ್ಲಿ ಇರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಮತ್ತೆ ವಶಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಒಬ್ಬ ಗುಲಾಮನು ತನ್ನ ಧಣಿಯ ಬಳಿಯಿಂದ ನಿಮ್ಮ ಬಳಿಗೆ ಓಡಿ ಬಂದರೆ ನೀವು ಅವನ ಧಣಿಗೆ ಅವನನ್ನು ಒಪ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತನ್ನ ಯಜಮಾನನನ್ನು ಬಿಟ್ಟು, ನಿನ್ನ ಬಳಿಗೆ ತಪ್ಪಿಸಿಕೊಂಡು ಬಂದ ದಾಸನನ್ನು ಹಿಡಿದು ಯಜಮಾನನಿಗೆ ಒಪ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:15
10 ತಿಳಿವುಗಳ ಹೋಲಿಕೆ  

ಅನಂತರ ದಾವೀದನು - ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರಕೊಂಡು ಹೋಗುವಿಯೋ ಎಂದು ಕೇಳಿದ್ದಕ್ಕೆ ಅವನು - ನೀನು ನನ್ನನ್ನು ಕೊಲ್ಲುವದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು ಅಂದನು.


ಓಡಿಹೋಗುವವರನ್ನು ಕೊಲ್ಲುವದಕ್ಕೆ ದಾರಿಗಳು ಕೂಡುವ ಸ್ಥಳದಲ್ಲಿ ನಿಲ್ಲಬಾರದಾಗಿತ್ತು; ಇಕ್ಕಟ್ಟಿನ ವೇಳೆಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿಗೆ ಒಪ್ಪಿಸಬಾರದಾಗಿತ್ತು.


ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ನಿರ್ಬಂಧಪಡಿಸಬಾರದು.


ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು; ನೀವು ನನಗೆ ಪ್ರಜೆಯಾಗಿರುವಿರಿ.


ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸು. ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು.


ಆವರೆಗೆ ನಿದ್ರಿಸುವವನಂತೆಯೂ ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚತ್ತು


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು