ಧರ್ಮೋಪದೇಶಕಾಂಡ 23:20 - ಕನ್ನಡ ಸತ್ಯವೇದವು J.V. (BSI)20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಹೊಂದುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸಹೋದರನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೆಲಸಗಳನ್ನು ಆಶೀರ್ವದಿಸುತ್ತಾರೆ. ಅಧ್ಯಾಯವನ್ನು ನೋಡಿ |