Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:3 - ಕನ್ನಡ ಸತ್ಯವೇದವು J.V. (BSI)

3 ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:3
11 ತಿಳಿವುಗಳ ಹೋಲಿಕೆ  

ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ


ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನಿಯರೂ ಅಷ್ಡೋದಿನವರೂ ಯೆರೂಸಲೇವಿುನ ಗೋಡೆಯ ಜೀರ್ಣೋದ್ಧಾರಕಾರ್ಯವು ಮುಂದರಿದು ಅದರ ಸಂದುಗಳು ತಿರಿಗಿ ಕೂಡುತ್ತಾ ಬರುವದನ್ನು ಕೇಳಿ ಬಹುಕೋಪವುಳ್ಳವರಾಗಿ -


ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು.


ಆ ಸಮೀಪಬಂಧುವು - ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು ಅಂದನು.


ಯೆಹೋವನನ್ನು ಅವಲಂಬಿಸಿದ ವಿದೇಶೀಯನು - ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು ಎಂದು ಮಾತಾಡದಿರಲಿ; ಮತ್ತು ನಪುಂಸಕನು - ಅಯ್ಯೋ, ನಾನು ಗೊಡ್ಡುಮರ ಎಂದು ಅಂದುಕೊಳ್ಳದಿರಲಿ.


ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ.


ಅಗಮ್ಯಾಗಮನದಿಂದುಂಟಾದ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.


ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು