Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:14 - ಕನ್ನಡ ಸತ್ಯವೇದವು J.V. (BSI)

14 ನೀವು ಸ್ವದೇಶದವರಲ್ಲಿಯಾಗಲಿ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡಕೂಲಿಯವನಿಗೆ ಏನೂ ಅನ್ಯಾಯಮಾಡದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಸ್ವದೇಶದವರಲ್ಲೇ ಆಗಲಿ, ನಿಮ್ಮಲ್ಲಿ ಇರುವ ಅನ್ಯದೇಶದವರಲ್ಲೇ ಆಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ನೀವು ಏನೂ ಅನ್ಯಾಯ ಮಾಡಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಬಡವನಾಗಿರುವ ದಿನಕೂಲಿಯವನಿಗೆ ಮೋಸ ಮಾಡಬಾರದು. ಅವನು ಇಸ್ರೇಲನಾಗಿರಬಹುದು ಅಥವಾ ಪರದೇಶಸ್ಥನಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:14
15 ತಿಳಿವುಗಳ ಹೋಲಿಕೆ  

ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.


ಬಡವನು ತಲೆಯ [ಮೇಲೆ ಎರಚಿಕೊಂಡ] ನೆಲದ ದೂಳನ್ನೂ ಆತುರವಾಗಿ ಆಶಿಸುತ್ತಾರೆ; ದೀನರ ದಾರಿಗೆ ಅಡ್ಡಿಹಾಕುತ್ತಾರೆ; ಮಗನೂ ತಂದೆಯೂ ಒಬ್ಬಳಲ್ಲೇ ಹೋಗಿ ನನ್ನ ಪವಿತ್ರನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ;


ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವದು? ಗೋದಿಯನ್ನು ಅಂಗಡಿಯಿಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ, ತೊಲವನ್ನು ಹೆಚ್ಚಿಸೋಣ, ಸುಳ್ಳುತಕ್ಕಡಿಯಿಂದ ಮೋಸಮಾಡೋಣ;


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಶಾಸ್ತ್ರದಲ್ಲಿ ಹೇಳಿದೆಯಲ್ಲಾ.


ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು