ಧರ್ಮೋಪದೇಶಕಾಂಡ 24:4 - ಕನ್ನಡ ಸತ್ಯವೇದವು J.V. (BSI)4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಪರಿಗ್ರಹಿಸುವದು ಯೆಹೋವನಿಗೆ ಹೇಯಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶ ಕೊಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದವಳು; ಅವಳನ್ನು ಪುನಃ ಪರಿಗ್ರಹಿಸುವುದು ಸರ್ವೇಶ್ವರನಿಗೆ ಹೇಯಕಾರ್ಯ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿಗೆ ದೋಷವುಂಟಾಗಲು ಅವಕಾಶಕೊಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು. ಅಧ್ಯಾಯವನ್ನು ನೋಡಿ |