Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:5 - ಕನ್ನಡ ಸತ್ಯವೇದವು J.V. (BSI)

5 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇವಿುಸಬಾರದು; ಅವನು ಒಂದು ವರುಷದವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನು ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದವರೆಗೆ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು, ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಬ್ಬನು ಹೊಸದಾಗಿ ಮದುವೆಯಾಗಿದ್ದಲ್ಲಿ ಅವನನ್ನು ಸೈನ್ಯಕ್ಕೆ ಕಳುಹಿಸಬಾರದು; ವಿಶೇಷವಾದ ಜವಾಬ್ದಾರಿಯನ್ನು ಅವನಿಗೆ ಕೊಡಬಾರದು. ಒಂದು ವರ್ಷ ಅವನು ಮನೆಯಲ್ಲಿದ್ದುಕೊಂಡು ತನ್ನ ಹೆಂಡತಿಯನ್ನು ಸಂತೋಷಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:5
12 ತಿಳಿವುಗಳ ಹೋಲಿಕೆ  

ನಿನ್ನ ಬುಗ್ಗೆಯು [ದೇವರ] ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.


ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.


ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು.


ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,


ಇನ್ನೊಬ್ಬನು - ನಾನು ಮದುವೆಮಾಡಿಕೊಂಡಿದ್ದೇನೆ, ಆದ್ದರಿಂದ ನಾನು ಬರುವದಕ್ಕಾಗುವದಿಲ್ಲ ಅಂದನು.


ಬೀಸುವಕಲ್ಲನ್ನು ಪೂರ್ತಿಯಾಗಲಿ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು