ಧರ್ಮೋಪದೇಶಕಾಂಡ 24:7 - ಕನ್ನಡ ಸತ್ಯವೇದವು J.V. (BSI)7 ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವನನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |