Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:8 - ಕನ್ನಡ ಸತ್ಯವೇದವು J.V. (BSI)

8 ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:8
11 ತಿಳಿವುಗಳ ಹೋಲಿಕೆ  

ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡಿಸಬೇಕಾದ ಕ್ರಮ ಹೇಗಂದರೆ - ಅವನನ್ನು ಯಾಜಕನಿಗೆ ತೋರಿಸಬೇಕು.


ಆತನು ಅವರನ್ನು ನೋಡಿ - ನೀವು ಹೋಗಿ ಯಾಜಕರಿಗೆ ಮೈ ತೋರಿಸಿಕೊಳ್ಳಿರಿ ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.


ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.


ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.


ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


ಇವುಗಳಲ್ಲಿ ಶುದ್ಧಾಶುದ್ಧ ಭೇದವನ್ನು ತಿಳಿಸುವ ವಿಧಿ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು