Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:15 - ಕನ್ನಡ ಸತ್ಯವೇದವು J.V. (BSI)

15 ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ತೂಕದ ಬಟ್ಟೂ, ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿ ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:15
14 ತಿಳಿವುಗಳ ಹೋಲಿಕೆ  

ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಜೀವದಲ್ಲಿ ಸಂತೋಷಪಟ್ಟು ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನೂ ಬಿಗಿಹಿಡಿಯಲಿ.


ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂವಿುಯ ಮೇಲೆ ಬಹುಕಾಲ ಬದುಕುವಿ.


ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ?


ಹೀಗಾದರೆ ಅವನೂ ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ ಇಸ್ರಾಯೇಲ್ಯರ ನಡುವೆ ಬಾಳುವರು.


ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.


ಯೆಹೋವನ ದೃಷ್ಟಿಗೆ ಯಾವದು ನ್ಯಾಯವೂ ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವದು, ಮತ್ತು ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು.


ನಿಮ್ಮ ತೂಕದ ಕಲ್ಲೂ ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು.


ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.


ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು