Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:18 - ಕನ್ನಡ ಸತ್ಯವೇದವು J.V. (BSI)

18 ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ ನೀವು ದಣಿದು ಬಳಲಿ ಇದ್ದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರು; ನೀವು ದಣಿದು ಬಳಲಿದ್ದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಮಾರ್ಗದಲ್ಲಿ ನಿಮಗೆ ಎದುರುಗೊಂಡು, ನೀವು ಆಯಾಸವುಳ್ಳವರಾಗಿಯೂ, ದಣಿದವರಾಗಿಯೂ ಇದ್ದ ಸಮಯದಲ್ಲಿ ನಿಮ್ಮ ಹಿಂದೆ ಇದ್ದ ಬಲಹೀನರೆಲ್ಲರನ್ನು ಹಿಂಭಾಗದಲ್ಲಿ ಸಂಹಾರ ಮಾಡಿದರು. ಅವರಿಗೆ ದೇವರ ಬಗ್ಗೆ ಯಾವ ಭಯವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:18
6 ತಿಳಿವುಗಳ ಹೋಲಿಕೆ  

ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.


ಆಗ ಅಮಾಲೇಕ್ಯರು ರೆಫೀದೀವಿುನಲ್ಲಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡುವದಕ್ಕೆ ಬರಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು