Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:19 - ಕನ್ನಡ ಸತ್ಯವೇದವು J.V. (BSI)

19 ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:19
22 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.


ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂವಿುಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.


ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.


ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.


ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ


ಆದದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸುವರು. ಅವರು ಶಾಪಗ್ರಸ್ತರೇ. ಶಾಪಕ್ಕೆ ಕಾರಣವಾದದ್ದನ್ನು ನಿಮ್ಮ ಮಧ್ಯದಿಂದ ತೆಗೆದು ಹಾಕುವವರೆಗೆ ನಾನು ನಿಮ್ಮ ಸಂಗಡ ಬರುವದಿಲ್ಲ. ಎದ್ದು ಜನರನ್ನು ಶುದ್ಧಪಡಿಸು.


ನಿಮ್ಮ ಭಟರೆಲ್ಲಾ ಆರು ದಿವಸಗಳವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ.


ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವಾಸ್ತ್ಯಕ್ಕೆ ಸೇರಿ ನೀವು ಇನ್ನು ವಿಶ್ರಾಂತಿ ಹೊಂದಲಿಲ್ಲವಲ್ಲಾ.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು