Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:5 - ಕನ್ನಡ ಸತ್ಯವೇದವು J.V. (BSI)

5 ಅಣ್ಣ ತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆ ಆಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:5
11 ತಿಳಿವುಗಳ ಹೋಲಿಕೆ  

ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದನಷ್ಟೆ.


ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.


ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.


ಆಗ ಬೋವಜನು - ನೀನು ನೊವೊವಿುಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ ಹೊಲದ ಖಾತೆಯು ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುವಂತೆ ಅವನ ಹೆಂಡತಿಯೂ ಮೋವಾಬ್ ಸ್ತ್ರೀಯೂ ಆದ ರೂತಳನ್ನೂ ತೆಗೆದುಕೊಳ್ಳಬೇಕು ಎಂದು ತಿಳಿಸಲು


ಅವನು ಆಕೆಯನ್ನು - ನೀನು ಯಾರು ಎಂದು ಕೇಳಲು ಆಕೆಯು - ನಾನು ನಿನ್ನ ದಾಸಿಯಾದ ರೂತಳು. ನೀನು ಸಮೀಪಬಂಧುವಾಗಿರುವದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು ಅಂದಳು.


ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ - ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;


ಆಕೆಯು - ನನ್ನ ಮಕ್ಕಳೇ, ನೀವು ನನ್ನೊಡನೆ ಬರುವದೇಕೆ? ಹಿಂದಿರುಗಿ ಹೋಗಿರಿ; ನಿಮಗೆ ಗಂಡಂದಿರನ್ನು ಕೊಡುವದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.


ನೀನು ಯಾವನ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಾಗಿರುತ್ತಾನಲ್ಲಾ! ಅವನು ಇಂದಿನ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.


ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನಡಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನಡಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು