Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:8 - ಕನ್ನಡ ಸತ್ಯವೇದವು J.V. (BSI)

8 ಆಗ ಆ ಊರಿನ ಹಿರಿಯರು ಅವನನ್ನು ಕರಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು - ಈಕೆಯನ್ನು ಪರಿಗ್ರಹಿಸುವದಕ್ಕೆ ನನಗೆ ಇಷ್ಟವಿಲ್ಲ ಎಂದು ಹೇಳುವ ಪಕ್ಷಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, “ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ,” ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:8
5 ತಿಳಿವುಗಳ ಹೋಲಿಕೆ  

ಆ ಸಮೀಪಬಂಧುವು - ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು ಅಂದನು.


ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ - ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವದಿಲ್ಲ ಅನ್ನುತ್ತಾನೆ ಎಂದು ತಿಳಿಸಬೇಕು.


ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು ಅವನ ಮುಖದ ಮೇಲೆ ಉಗುಳಿ - ಅಣ್ಣನಿಗೋಸ್ಕರ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ ಎಂದು ಹೇಳಬೇಕು.


ಯಾವದಾದರೊಂದು ವಸ್ತುವನ್ನು ತೆಗೆದುಕೊಳ್ಳುವಾಗಲೂ ಕೊಡುವಾಗಲೂ ಮಾತನ್ನು ದೃಢಪಡಿಸುವದಕ್ಕೋಸ್ಕರ ಇಸ್ರಾಯೇಲ್ಯರಲ್ಲಿ ಪೂರ್ವಕಾಲದಿಂದಿದ್ದ ಪದ್ಧತಿ ಯಾವದಂದರೆ - ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಕೆರವನ್ನು ಕೊಡುವನು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.


ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕೂತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ. ಇಲ್ಲದಿದ್ದರೆ ನನಗೆ ತಿಳಿಸು; ನನಗೆ ಗೊತ್ತಾಗಬೇಕು. ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ ಎಂದು ಹೇಳಲು ಅವನು - ನಾನೇ ಕೊಂಡುಕೊಳ್ಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು