ಧರ್ಮೋಪದೇಶಕಾಂಡ 25:9 - ಕನ್ನಡ ಸತ್ಯವೇದವು J.V. (BSI)9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು ಅವನ ಮುಖದ ಮೇಲೆ ಉಗುಳಿ - ಅಣ್ಣನಿಗೋಸ್ಕರ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, “ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು,” ಎಂದು ಹೇಳಲಿ. ಅಧ್ಯಾಯವನ್ನು ನೋಡಿ |