Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:19 - ಕನ್ನಡ ಸತ್ಯವೇದವು J.V. (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:19
21 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಸಮಸ್ತ ಇಸ್ರಾಯೇಲ್ ವಂಶವೂ ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರುವಾಸಿಯೂ ಸ್ತೋತ್ರವೂ ಮಹಿಮೆಯೂ ಆಗಿರಲೆಂದು ನಡುಕಟ್ಟು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳಲೊಲ್ಲದೆ ಹೋದರು ಎಂದು ಯೆಹೋವನು ಅನ್ನುತ್ತಾನೆ.


ಆತನು ತನ್ನ ಪ್ರಜೆಗೋಸ್ಕರ [ಘನದ] ಕೊಂಬನ್ನು ಎಬ್ಬಿಸಿದ್ದಾನೆ. ಆದದರಿಂದ ಆತನ ಎಲ್ಲಾ ಭಕ್ತರೂ ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲ್ಯರೂ ಹಿಗ್ಗುತ್ತಾರೆ. ಯಾಹುವಿಗೆ ಸ್ತೋತ್ರ!


ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ತೊಲಗದೆ ಬೇರೆ ದೇವರುಗಳನ್ನು ಅವಲಂಬಿಸದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು; ನೀವು ಎಲ್ಲರಿಗಿಂತಲೂ ಮೇಲಣವರಾಗಿರುವಿರೇ ಹೊರತು ಕೆಳಗಣವರಾಗಿರುವದಿಲ್ಲ.


ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.


ಮೋಶೆಯು ಇಸ್ರಾಯೇಲ್ಯರ ಹಿರಿಯರ ಸಹಿತ ಜನರಿಗೆ - ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.


ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು