Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:6 - ಕನ್ನಡ ಸತ್ಯವೇದವು J.V. (BSI)

6 ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ ಬಾಧಿಸಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಈಜಿಪ್ಟಿನವರು ನಮ್ಮನ್ನು ಕ್ರೂರವಾಗಿ ನಡೆಸಿ, ನಮ್ಮ ಮೇಲೆ ದಬ್ಬಾಳಿಕೆ ಮಾಡಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:6
11 ತಿಳಿವುಗಳ ಹೋಲಿಕೆ  

ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.


ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಾನಲ್ಲಾ; ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲೇ ಇಲ್ಲ ಅಂದನು.


ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದರಿಂದ ಇಸ್ರಾಯೇಲ್ ಮೇಸ್ತ್ರಿಗಳು ತಮಗೆ ದುರವಸ್ಥೆಯುಂಟಾಯಿತು ಎಂದು ತಿಳಿದುಕೊಂಡರು.


ನೀವು ಅವರಿಂದ ಕಷ್ಟವಾದ ಬಿಟ್ಟೀಕೆಲಸವನ್ನು ಮಾಡಿಸಬೇಕು. ಅವರಿಗೆ ಕಷ್ಟವಾದ ಕೆಲಸವಿದ್ದರೆ ಸುಳ್ಳು ಮಾತುಗಳಿಗೆ ಲಕ್ಷ್ಯ ಕೊಡುವದಕ್ಕೆ ಮಾರ್ಗವಿಲ್ಲ ಎಂದು ಆಜ್ಞೆ ಮಾಡಿದನು.


ತರುವಾಯ ಫರೋಹನು ತನ್ನ ಜನರಿಗೆಲ್ಲಾ - [ಇಬ್ರಿಯರ] ಗಂಡುಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು ಎಂದು ಆಜ್ಞೆ ಮಾಡಿದನು.


ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು.


ತರುವಾಯ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಐಗುಪ್ತದೇಶದ ಆಳಿಕೆಗೆ ಬಂದನು.


ನಾವು ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ಕೇಳಿ ನಮ್ಮ ದುರವಸ್ಥೆಯನ್ನೂ ಕಷ್ಟವನ್ನೂ ಉಪದ್ರವವನ್ನೂ ನೋಡಿ


ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು