Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:9 - ಕನ್ನಡ ಸತ್ಯವೇದವು J.V. (BSI)

9 ನಮ್ಮನ್ನು ಬಿಡಿಸಿ ಐಗುಪ್ತದೇಶದಿಂದ ಕರತಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟ್ ದೇಶದಿಂದ ಕರೆದುತಂದು ಹಾಲೂಜೇನೂ ಹರಿಯುವ ಈ ನಾಡನ್ನು ನಮಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಲ್ಲಿಂದ ನಮ್ಮನ್ನು ಕರೆದುತಂದು ನಮಗೆ ಈ ಒಳ್ಳೆಯ ದೇಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:9
12 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.


ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನೂ ಈಗ ಅನುಸರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ; ಎಲ್ಲವೂ ತಪ್ಪದೆ ನೆರವೇರಿದವೆಂಬದು ನಿಮಗೆ ಮಂದಟ್ಟಾಯಿತಲ್ಲಾ.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು