ಧರ್ಮೋಪದೇಶಕಾಂಡ 27:1 - ಕನ್ನಡ ಸತ್ಯವೇದವು J.V. (BSI)1 ಮೋಶೆಯು ಇಸ್ರಾಯೇಲ್ಯರ ಹಿರಿಯರ ಸಹಿತ ಜನರಿಗೆ - ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆ ಇಸ್ರಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೋಶೆ ಮತ್ತು ಇಸ್ರಾಯೇಲಿನ ಹಿರಿಯರು ಜನರಿಗೆ, “ನಾವು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.