ಧರ್ಮೋಪದೇಶಕಾಂಡ 27:2 - ಕನ್ನಡ ಸತ್ಯವೇದವು J.V. (BSI)2-3 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2-3 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ, ಅಧ್ಯಾಯವನ್ನು ನೋಡಿ |