Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:20 - ಕನ್ನಡ ಸತ್ಯವೇದವು J.V. (BSI)

20 ಅವರು - ಮಲತಾಯಿಯನ್ನು ಸಂಗವಿುಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ಅವರು, ‘ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:20
12 ತಿಳಿವುಗಳ ಹೋಲಿಕೆ  

ತಂದೆಗೆ ಹೆಂಡತಿಯಾದವಳನ್ನು ಸಂಗವಿುಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವದು.


ಮಲತಾಯಿಯ ಸಂಗ ಮಾಡಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಯಾವನಾದರೂ ಮಲತಾಯಿಯನ್ನು ಕೂಡಿದರೆ ಅವನು ತಂದೆಗೇ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಬಡವನು ತಲೆಯ [ಮೇಲೆ ಎರಚಿಕೊಂಡ] ನೆಲದ ದೂಳನ್ನೂ ಆತುರವಾಗಿ ಆಶಿಸುತ್ತಾರೆ; ದೀನರ ದಾರಿಗೆ ಅಡ್ಡಿಹಾಕುತ್ತಾರೆ; ಮಗನೂ ತಂದೆಯೂ ಒಬ್ಬಳಲ್ಲೇ ಹೋಗಿ ನನ್ನ ಪವಿತ್ರನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ;


ನಿನ್ನಲ್ಲಿ ತಂದೆಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಆಗ ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.


ಆದರೂ ದಡವನ್ನು ಮೀರಿದ ಪ್ರವಾಹದಂತಿರುವ ನೀನು ಇನ್ನು ಪ್ರಮುಖನ ಸ್ಥಾನದಲ್ಲಿ ಇರುವದಿಲ್ಲ. ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ತಾಯಿಯನ್ನು ಎಷ್ಟು ಮಾತ್ರವೂ ಸಂಗವಿುಸಬಾರದು; ಆಕೆ ಹೆತ್ತವಳಲ್ಲವೆ; ಸಂಗವಿುಸಿದರೆ ತಂದೆಗೆ ಮಾನಭಂಗವಾಗುವದು.


ಬೀಜಹೊಡಿಸಿಕೊಂಡಾಗಲಿ ರಹಸ್ಯಾಂಗ ಛೇದಿಸಿಕೊಂಡಾಗಲಿ ನಪುಂಸಕರಾದವರು ಯೆಹೋವನ ಸಭೆಯಲ್ಲಿ ಸೇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು