Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:26 - ಕನ್ನಡ ಸತ್ಯವೇದವು J.V. (BSI)

26 ಅವರು - ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:26
13 ತಿಳಿವುಗಳ ಹೋಲಿಕೆ  

ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ನೇಮನಿಷ್ಠೆಗಳಿಂದಾಗುವ ನೀತಿಯ ವಿಷಯದಲ್ಲಿ - ಅದನ್ನು ಅನುಸರಿಸಿದವನೇ ಅದರಿಂದ ಜೀವಿಸುವನೆಂದು ಮೋಶೆಯು ಬರೆಯುತ್ತಾನೆ.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ನೀನು ಗರ್ವಿಷ್ಠರನ್ನು ಗದರಿಸುತ್ತೀ; ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಅಪರಾಧನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಪ್ರಭಾವದಿಂದಿರಲಾಗಿ ನೀತಿಗೆ ಸಾಧನವಾಗಿರುವ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.


ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು